PM Kisan Samman Nidhi 19th Installment : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 19ನೇ ಕಂತಿಗಾಗಿ ಲಕ್ಷಾಂತರ ರೈತರ ನಿರೀಕ್ಷೆ ಕೊನೆಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಫಲಾನುಭವಿಗಳ ಖಾತೆಗಳಿಗೆ 19 ನೇ ಕಂತಿನ 22 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಿದ್ದಾರೆ. ಪಿಎಂ ಕಿಸಾನ್ ಕಂತು ನಿಮ್ಮ ಖಾತೆಗೆ ಬಂದಿದೆಯೇ ಅಥವಾ ಇಲ್ಲವೇ ಎನ್ನುವುದನ್ನು ಸುಲಭವಾಗಿ ಪರಿಶೀಲಿಸಿಕೊಳ್ಳಿ.
ಪಿಎಂ ಕಿಸಾನ್ ಕಂತು ಹಣವನ್ನು ಪರಿಶೀಲಿಸುವುದು ಹೇಗೆ? :
ನೀವು ಕೂಡಾ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಯಾಗಿದ್ದರೆ, ಪಿಎಂ ಕಿಸಾನ್ ನ 19 ನೇ ಕಂತಿನ ಹಣ ನಿಮ್ಮ ಖಾತೆಗೆ ಬಂದಿದೆಯೇ ಅಥವಾ ಇಲ್ಲವೇ ಎನ್ನುವುದನ್ನು ತಕ್ಷಣ ಪರಿಶೀಲಿಸಿಕೊಳ್ಳಿ. ನೀವು ಕುಳಿತಲ್ಲಿಂದಲೇ ಈ ಕೆಲಸವನ್ನು ಕ್ಷಣಾರ್ಧದಲ್ಲಿ ಮಾಡಬಹುದು. ಇದಕ್ಕಾಗಿ ನೀವು ಪಿಎಂ ಕಿಸಾನ್‌ನ ಆನ್‌ಲೈನ್ ವೆಬ್‌ಸೈಟ್‌ಗೆ ಭೇಟಿ ನೀಡಿ, ಕಂತಿನ ಸ್ಟೇಟಸ್ ಅನ್ನು ನೋಡಬಹುದು.ಅದರ ಹಂತ ಹಂತದ ಪ್ರಕ್ರಿಯೆಯನ್ನು ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ : ಇದೊಂದು ಟ್ರಿಕ್ ಬಳಸಿ 40 ಲಕ್ಷ ರೂಪಾಯಿಗಳ ಗೃಹ ಸಾಲದ ಇಎಂಐ ಕಡಿಮೆ ಮಾಡಬಹುದು! 12 ಲಕ್ಷ ರೂಪಾಯಿಗಳ ಬಡ್ಡಿಯೂ ಉಳಿಯುವುದು !
ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಪರಿಶೀಲಿಸುವುದು ಹೇಗೆ?
- ಮೊದಲು ನೀವು PM ಕಿಸಾನ್ pmkisan.gov.inನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
- ನಂತರ, ಮುಖಪುಟದಲ್ಲಿ “Know Your Status” ಆಯ್ಕೆ ಮೇಲೆ ಕ್ಲಿಕ್ ಮಾಡಿ.
- ಈಗ “Beneficiary Status” ಆಯ್ಕೆಯನ್ನು ಆರಿಸಿ.
- ನಿಮ್ಮ ಮುಂದೆ ಹೊಸ ಪುಟ ತೆರೆಯುತ್ತದೆ. ನೋಂದಣಿ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆಯನ್ನು ಇಲ್ಲಿ ನಮೂದಿಸಿ.
- ಕ್ಯಾಪ್ಚಾ ಕೋಡ್ ನಮೂದಿಸಿ ಮತ್ತು “Get Data” ಮೇಲೆ ಕ್ಲಿಕ್ ಮಾಡಿ
- ನಿಮ್ಮ ಸ್ಟೇಟಸ್ ಪರದೆಯ ಮೇಲೆ ಗೋಚರಿಸುತ್ತದೆ.
- ಕಂತಿನ ಹಣವನ್ನು ಬಿಡುಗಡೆ ಮಾಡಿದ್ದರೆ, “Payment Successfully Credited” ಎಂಬ ಸಂದೇಶ ಬರುತ್ತದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಕೇಂದ್ರ ಸರ್ಕಾರವು ಅಗತ್ಯವಿರುವ ಮತ್ತು ಅರ್ಹ ರೈತರಿಗೆ ವಾರ್ಷಿಕವಾಗಿ 6,000 ರೂ.ಗಳ ಆರ್ಥಿಕ ಸಹಾಯವನ್ನು ನೀಡುತ್ತಿದೆ. ಈ ಹಣವನ್ನು ಒಂದು ವರ್ಷದಲ್ಲಿ ಮೂರು ಸಮಾನ ಕಂತುಗಳಲ್ಲಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗುತ್ತದೆ. ಇಲ್ಲಿಯವರೆಗೆ, ಯೋಜನೆಯ 18 ಕಂತುಗಳಿಗೆ ಹಣವನ್ನು ಡಿಬಿಟಿ ಮೂಲಕ ಕಳುಹಿಸಲಾಗಿದೆ. ಇಂದು, 19ನೇ ಕಂತಿನ ನಿರೀಕ್ಷೆ ಕೂಡಾ ಕೊನೆಯಾಗಿದೆ.
ಇದನ್ನೂ ಓದಿ : ಪಿಎಫ್ ಸದಸ್ಯರಿಗೆ 3 ಶುಭ ಸುದ್ದಿ:ಬಡ್ಡಿದರ,ಪಿಂಚಣಿ ಹೆಚ್ಚಳ!ಕೇವಲ 4 ದಿನಗಳಲ್ಲಿ ಹೊರ ಬೀಳುವುದು ಪ್ರಮುಖ ಘೋಷಣೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.