ಕೆಎಸ್ಪಿಸಿಬಿ ಅಧ್ಯಕ್ಷರ ನೇಮಕ ಮಾರ್ಗಸೂಚಿಗಳನ್ನು ತಿದ್ದಪಡಿ ಮಾಡಲು ಹೈಕೋರ್ಟ್ ಸೂಚನೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಈ ಹಿಂದೆ ವಿವಿಧ ನ್ಯಾಯಾಲಯಗಳು ನೀಡಿರುವ ಆದೇಶಗಳಂತೆ ಅಗತ್ಯ ಮಾರ್ಗಸೂಚಿಗಳನ್ನು ತಿದ್ದಪಡಿ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Written by - Bhavya Sunil Bangera | Edited by - Manjunath N | Last Updated : Nov 29, 2023, 07:18 PM IST
  • ಕೆಎಸ್ಪಿಸಿಬಿ ಅಧ್ಯಕ್ಷರನ್ನಾಗಿ ೦೫.೦೩.೨೦೧೯ರಂದು ಜಯರಾಂ ಎಂಬವರನ್ನು ೦೪.೦೩.೨೦೨೨ರವರೆಗೆ ನೇಮಕ ಮಾಡಲಾಗಿತ್ತು.
  • ಜಯರಾಂ ಅವರು ೨೦.೦೬.೨೦೧೯ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷರ ಹುದ್ದೆಗೆ ಉಸ್ತುವಾರಿ ಅಧ್ಯಕ್ಷರನ್ನು ನೇಮಕ ಮಾಡಲಾಗಿತ್ತು.
  • ಆನಂತರ ನೇಮಕಗೊಂಡವರು ಮೂರರಿಂದ ಆರು ತಿಂಗಳವರೆಗೆ ಹುದ್ದೆಯಲ್ಲಿದ್ದರು.
 ಕೆಎಸ್ಪಿಸಿಬಿ ಅಧ್ಯಕ್ಷರ ನೇಮಕ ಮಾರ್ಗಸೂಚಿಗಳನ್ನು ತಿದ್ದಪಡಿ ಮಾಡಲು ಹೈಕೋರ್ಟ್ ಸೂಚನೆ title=
ಸಾಂಧರ್ಭಿಕ ಚಿತ್ರ

ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಈ ಹಿಂದೆ ವಿವಿಧ ನ್ಯಾಯಾಲಯಗಳು ನೀಡಿರುವ ಆದೇಶಗಳಂತೆ ಅಗತ್ಯ ಮಾರ್ಗಸೂಚಿಗಳನ್ನು ತಿದ್ದಪಡಿ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಸಲಾರ್‌ಗೂ ಕೆಜಿಎಫ್‌ಗೂ ಲಿಂಕ್ ಇದೆಯಾ? ಅಸಲಿ ಕಥೆ ಬಿಚ್ಚಿಟ್ಟ ನಿರ್ದೇಶಕ ಪ್ರಶಾಂತ್‌ ನೀಲ್‌! 

ತಮ್ಮ ಅಧಿಕಾರವಧಿಯನ್ನು ಮೊಟಕುಗೊಳಿಸಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಕೆಎಸ್ಪಿಸಿಬಿ ಅಧ್ಯಕ್ಷರಾಗಿದ್ದ ಶಾಂತ್ ಎ. ತಿಮ್ಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.ಈ ಅರ್ಜಿಯೊಂದಿಗೆ ಕೆಎಸ್ಪಿಸಿಬಿ ಅಧ್ಯಕ್ಷರ ನೇಮಕ ಸಂಬಂಧ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಕೆಎಸ್ಪಿಸಿಬಿ ಅಧ್ಯಕ್ಷರು, ಸದಸ್ಯರು ಮತ್ತು ಸದಸ್ಯ ಕಾರ್ಯದರ್ಶಿಗಳ ನೇಮಕ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳು ನೀರು(ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯಿದೆ ಹಾಗು ಸುಪ್ರೀಂಕೋರ್ಟ್ ಮತ್ತು ವಿವಿಧ ಹೈಕೋರ್ಟ್ಗಳ ಆದೇಶಕ್ಕೆ ತದ್ವಿರುದ್ದವಾಗಿದೆ. ಆದ್ದರಿಂದ ಮಾರ್ಗಸೂಚಿಗಳನ್ನು ಅಗತ್ಯ ರೀತಿಯಲ್ಲಿ ತಿದ್ದುಪಡಿ ಮಾಡಬೇಕು ಎಂದು ಸೂಚನೆ ನೀಡಿದೆ.ಅಲ್ಲದೆ, ಅರ್ಜಿದಾರರ ಶಾಂತ್ ಎ.ತಿಮ್ಮಯ್ಯ ಅವರ ನೇಮಕಾತಿ ಅಮಾನ್ಯಗೊಳಿಸಿಲ್ಲ. ಅವರ ಸೇವಾಧಿ ೨೦೨೪ರ ನವೆಂಬರ್ ೪ರ ವರೆಗೂ ಇರಲಿದೆ ಎಂದು ತಿಳಿಸಿ ಅರ್ಜಿಯನ್ನು ಇತ್ಯರ್ಥ ಪಡಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಲಭ್ಯವಾಗಬೇಕಿದೆ.

ಇದನ್ನೂ ಓದಿ: ರಣಬೀರ್ ಗಿಂತ ಮೊದಲು ಮಹೇಶ್ ಬಾಬುಗೆ ANIMAL ಸಿನಿಮಾ ಆಫರ್ ಬಂದಿತ್ತಾ? 

ಪ್ರಕರಣದ ಹಿನ್ನೆಲೆ ಏನು ?

ಕೆಎಸ್ಪಿಸಿಬಿ ಅಧ್ಯಕ್ಷರನ್ನಾಗಿ ೦೫.೦೩.೨೦೧೯ರಂದು ಜಯರಾಂ ಎಂಬವರನ್ನು ೦೪.೦೩.೨೦೨೨ರವರೆಗೆ ನೇಮಕ ಮಾಡಲಾಗಿತ್ತು. ಜಯರಾಂ ಅವರು ೨೦.೦೬.೨೦೧೯ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷರ ಹುದ್ದೆಗೆ ಉಸ್ತುವಾರಿ ಅಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ಆನಂತರ ನೇಮಕಗೊಂಡವರು ಮೂರರಿಂದ ಆರು ತಿಂಗಳವರೆಗೆ ಹುದ್ದೆಯಲ್ಲಿದ್ದರು. ೧೫.೧೧.೨೦೨೧ರಂದು ಶಾಂತ್ ತಿಮ್ಮಯ್ಯ ಅವರನ್ನು ಕೆಎಸ್ಪಿಸಿಬಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಅವರ ಅವಧಿಯು ೦೪.೦೩.೨೦೨೨ಕ್ಕೆ ಬದಲಾಗಿ ೧೪.೧೧.೨೦೨೪ಕ್ಕೆ ಮುಗಿಯುತ್ತದೆ ಎಂದು ತಪ್ಪಾಗಿ ಉಲ್ಲೇಖಿಸಲಾಗಿದೆ. ಈ ಪ್ರಮಾದವನ್ನು ಸರಿಪಡಿಸಲಾಗಿದ್ದು, ಶಾಂತ್ ತಿಮ್ಮಯ್ಯ ಅವರ ಅಧ್ಯಕ್ಷ ಅವಧಿಯು ೦೪.೦೩.೨೦೨೨ಕ್ಕೆ ಅಂತ್ಯವಾಗಿದೆ ಎಂದು ತಿದ್ದುಪಡಿಯಲ್ಲಿ ವಿವರಿಸಲಾಗಿತ್ತು. ಇದನ್ನು ಪ್ರಶ್ನಿಸಿ ಶಾಂತ್ ಎ ತಿಮ್ಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News