ಬೆಂಗಳೂರು : "ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
"ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು.ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯ್ತಿ, ವಿಧಾನ ಸಭೆ, ಸಂಸತ್ ಚುನಾವಣೆ ಎಲ್ಲದಕ್ಕೂ ಬೇಕು. ಅವರನ್ನು ಪಕ್ಷ ಎರಡು ಬಾರಿ ಸಿಎಂ ಮಾಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದು, ಅವರ ಹೆಸರು ಮಾಧ್ಯಮಗಳಿಗೆ ಆಹಾರವಾಗುವಂತೆ ಗೊಂದಲದ ಹೇಳಿಕೆ ಬೇಡ ಎಂದು ತಿಳಿಸಿದರು. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಪಕ್ಷ ದಿನ ನಿತ್ಯ ಎಲ್ಲವನ್ನು ಗಮನಿಸುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ : ನಾನು ಎರಡು ಸಾರಿ ಜೈಲಿಗೆ ಹೋಗಿ ಬಂದಿದ್ದೆ
ಅಧಿಕಾರದಲ್ಲಿದ್ದುಕೊಂಡು ಹೋರಾಟ ಯಾಕೆ ಮಾಡುತ್ತಾರೆ:
ನೀರಾವರಿ ವಿಚಾರವಾಗಿ ಪಕ್ಷಾತೀತ ಹೋರಾಟ ಮಾಡಬೇಕು ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, "ರಾಜ್ಯದ ನೆಲ, ಜಲ ಹಿತಕ್ಕಾಗಿ ನಾವು ಬದ್ಧವಾಗಿದ್ದೇವೆ. ಅವರು ಮೇಕೆದಾಟಿಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಮಹದಾಯಿ ವಿಚಾರವಾಗಿ ನಾನೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ಇದು ಅವರ ಹೋರಾಟವಲ್ಲ. ರಾಜ್ಯದ ಹೋರಾಟ. ಅವರು ಅಧಿಕಾರದಲ್ಲಿ ಇರುವಾಗ ಹೋರಾಟ ಯಾಕೆ ಮಾಡಬೇಕು? ನಾವು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ನಮಗೆ ಅದರ ಅಗತ್ಯವಿಲ್ಲ. ಅವರಿಗೆ ರಾಜಕಾರಣ ಮಾಡಿ ರೂಢಿ ಇರಬಹುದು. ನಾವು ಹೋರಾಟ ಮಾಡಿದಾಗ ಅವರು ಯಾವ ರೀತಿ ಟೀಕೆ ಮಾಡಿದ್ದಾರೆ ಎಂದು ನೋಡಿದ್ದೇವೆ. ನಾವು ಅದನ್ನು ಮರೆತು ರಾಜ್ಯದ ಹಿತಕ್ಕಾಗಿ ನೀರಾವರಿ ಯೋಜನೆಗೆ ಪ್ರಯತ್ನಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ : ಯಡಿಯೂರಪ್ಪ ಶ್ರಮ ಜೀವಿ,ಇವ್ರೆಲ್ಲಾ ಯಾರ್ರೀ
ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಘೋಷಣೆ ಮಾಡಿದ್ದೀರಿ, ಅದನ್ನು ಕೊಟ್ಟಿಲ್ಲ ಎಂದು ಅವರು ಸಂಸತ್ತಿನಲ್ಲಿ ಎಂದಾದರೂ ಪ್ರಶ್ನೆ ಮಾಡಿದ್ದಾರಾ? ದೇವೇಗೌಡರು, ಕುಮಾರಸ್ವಾಮಿ, ಕೇಂದ್ರ ಸಚಿವರು, ಸಂಸದರು ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಆ ಕೆಲಸದಲ್ಲೂ ವಿಫಲರಾಗಿದ್ದಾರೆ. ಮೊದಲು ಈ ಕೆಲಸ ಮಾಡಲಿ. ಕಾವೇರಿ ಗೋದಾವರಿ ಜೋಡಣೆ ಮಾಡಿದರೆ ಸಂತೋಷ. ಅವರು ಯೋಜನೆ ತರಲಿ. ನಮ್ಮಿಂದ ಯಾವ ಸಹಕಾರ ಬೇಕು ಹೇಳಲಿ, ನಾವು ನೀಡುತ್ತೇವೆ. ಇಲ್ಲಿಂದಲೇ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತೇವೆ" ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.