Virat Kohli: ಚಾಂಪಿಯನ್ ಟ್ರೋಫಿಯ ಭಾರತ ಮತ್ತು ಪಾಕಿಸ್ತಾನ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದು ವಿರಾಟ್ ಕೊಹ್ಲಿ ಸಾಧನೆ ಮೈಲಿಗಲ್ಲನ್ನು ತಲುಪಿದ್ದಾರೆ.
ಹೌದು, ಈ ಮೂಲಕ ಏಕದಿನ ಪಂದ್ಯದಲ್ಲಿ ಅತಿ ವೇಗವಾಗಿ 14,000 ರನ್ಗಳನ್ನು ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚಾಂಪಿಯನ್ ಟ್ರೋಫಿಗೂ ಮುನ್ನ ಈ ದಾಖಲೆಗೆ ವಿರಾಟ್ ಕೊಹ್ಲಿ ಗೆ ಕೇವಲ 15 ರನ್ಗಳ ಅವಶ್ಯಕತೆ ಇತ್ತು. ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 15 ರನ್ ಗಳಿಸುವ ಮೂಲಕ ಈ ಹೆಗ್ಗಳಿಕೆಗೆ ಪಾತ್ರರಾದರು.
1⃣4⃣0⃣0⃣0⃣ ODI RUNS for Virat Kohli 🫡🫡
And what better way to get to that extraordinary milestone 🤌✨
Live ▶️ https://t.co/llR6bWyvZN#TeamIndia | #PAKvIND | #ChampionsTrophy | @imVkohli pic.twitter.com/JKg0fbhElj
— BCCI (@BCCI) February 23, 2025
ದುಬೈನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಚಾಂಪಿಯನ್ಸ್ ಟ್ರೋಫಿ 2025ರ ಪಾಕಿಸ್ತಾನ ಹಾಗೂ ಭಾರತ ಪಂದ್ಯದಲ್ಲಿ ಪಾಕಿಸ್ತಾನ 242 ರನ್ಗಳ ಗೆಲುವಿನ ಗುರಿಯನ್ನು ನೀಡಿದೆ. ಗೆಲುವಿನ ಗುರಿಯನ್ನು ಬೆನ್ನಟ್ಟಿದ ಭಾರತ ತಂಡದಲ್ಲಿ ರೋಹಿತ್ ಶರ್ಮಾ ಔಟ್ ಆದ ಬಳಿಕ ಕಣಕ್ಕಿಳಿದ ವಿರಾಟ್ ಕೊಹ್ಲಿ 12ನೇ ಓವರ್ ನಲ್ಲಿ 15 ರನ್ ಗಳಿಸಿ ಈ ದಾಖಲೆಯನ್ನು ನಿರ್ಮಿಸಿದರು.
287 ಇನ್ನಿಂಗ್ಸ್ ಗಳಲ್ಲಿ 14,000 ರನ್ ಗಳಿಸಿರುವ ಕೊಹ್ಲಿ, ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ 350 ಇನ್ನಿಂಗ್ಸ್ ನಲ್ಲಿ 14 ಸಾವಿರ ರನ್ ಗಳಿಸಿದ್ದರು. ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಲ್ಲಿ 15 ರನ್ ಗಳಿಸಿದ ಕೊಹ್ಲಿ ಈ ದಾಖಲೆಯನ್ನು ಹಿಂದಿಕ್ಕಿದರು.
ಈ ಮೂಲಕ 300 ಏಕದಿನ ಪಂದ್ಯಗಳನ್ನು ಗಳಿಸಲು ಕೊಹ್ಲಿಗೆ ಒಂದು ಪಂದ್ಯದ ಅವಶ್ಯಕತೆ ಇದ್ದು, ಸಚಿನ್, ಎಂಎಸ್ ಧೋನಿ, ರಾಹುಲ್ ದ್ರಾವಿಡ್, ಮಹಮ್ಮದ್ ಅಜರುದ್ದೀನ್, ಸೌರವ್ ಗಂಗೂಲಿ ಹಾಗೂ ಯುವರಾಜ್ ಸಿಂಗ್ ಬಳಿಕ ಈ ಸಾಧನೆ ಮಾಡಿದ 7ನೇ ಭಾರತೀಯ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.