ICC Champions Trophy 2025, India vs Pakistan: ನಾಳೆ ಅಂದರೆ ಭಾನುವಾರ (ಫೆಬ್ರವರಿ 23) ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಸಂಪ್ರದಾಯಿಕ ಎದುರಾಳಿ ಪಾಕಿಸ್ತಾನ vs ಭಾರತ ಮುಖಾಮುಖಿಯಾಗಲಿವೆ. ಪ್ರಸಕ್ತ ಐಸಿಸಿ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಗ್ರೂಪ್ ʼAʼನ ಎರಡು ಬಲಿಷ್ಠ ತಂಡಗಳು ಸೆಣಸಾಡಲು ಸಜ್ಜಾಗಿವೆ. ಈ ಜಿದ್ದಾಜಿದ್ದಿನ ಹಣಾಹಣಿ ಕಣ್ತುಂಬಿಕೊಳ್ಳಲು ಇಡೀ ಕ್ರಿಕೆಟ್ ಜಗತ್ತೇ ಕಾದು ಕುಳಿತಿದೆ. ಈ ಮಹತ್ವದ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ.
ಉಭಯ ತಂಡಗಳಿಗೆ ಇದು ಟೂರ್ನಿಯ ಎರಡನೇ ಪಂದ್ಯವಾಗಿದೆ. ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 6 ವಿಕೆಟ್ಗಳ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಟೂರ್ನಿಯಲ್ಲಿ ಗೆಲುವಿನ ಆರಂಭ ಪಡೆದುಕೊಂಡಿತು. ಆದರೆ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿಯೇ ಆತಿಥೇಯ ಪಾಕಿಸ್ತಾನ ತಂಡವು ನ್ಯೂಜಿಲ್ಯಾಂಡ್ ವಿರುದ್ಧ ಹೀನಾಯವಾಗಿ ಸೋಲು ಕಂಡಿದೆ. ಹೀಗಾಗಿ ನಾಳಿನ ಪಂದ್ಯವು ಪಾಕಿಸ್ತಾನದ ಪಾಲಿಗೆ ನಿರ್ಣಾಯಕವಾಗಿದೆ.
Ready to go again on Super Sunday 🙌#TeamIndia | #ChampionsTrophy | #PAKvIND pic.twitter.com/wzgEvycPWG
— BCCI (@BCCI) February 22, 2025
ಇದನ್ನೂ ಓದಿ: ಕ್ರಿಕೆಟಿಗ ಧವನ್ ಜೊತೆ ವೈರಲ್ ಆದ ಲೇಡಿ ಯಾರು? ಅತಿ ಹೆಚ್ಚು ಇಂಟರ್ನೆಟ್ ಸರ್ಚ್ ಆಗಿದ್ದು ಈಕೆ ನೋಡಿ
ಭಾರತ vs ಪಾಕಿಸ್ತಾನ ಪಂದ್ಯ ಯಾವಾಗ ನಡೆಯಲಿದೆ?
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ Vs ಪಾಕಿಸ್ತಾನ ನಡುವಿನ ಪಂದ್ಯ ಫೆಬ್ರವರಿ 23ರ ಭಾನುವಾರ ನಡೆಯಲಿದೆ.
ಪಂದ್ಯ ಎಲ್ಲಿ ನಡೆಯಲಿದೆ?
ಭಾರತ Vs ಪಾಕಿಸ್ತಾನ ನಡುವಿನ ಪಂದ್ಯ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗಲಿದೆ?
ಭಾರತ Vs ಪಾಕಿಸ್ತಾನ ನಡುವಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದೆ. ಹೀಗಾಗಿ ಟಾಸ್ 2 ಗಂಟೆಗೆ ನಡೆಯಲಿದೆ.
🎥 Action from the nets in Dubai 🏏
📺 WATCH 👉 https://t.co/K2VH3pqfNd#ChampionsTrophy | #PAKvIND | #WeHaveWeWill pic.twitter.com/GTaycLCJW1
— Pakistan Cricket (@TheRealPCB) February 21, 2025
ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ Vs ಪಾಕಿಸ್ತಾನ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಸ್ಪೋರ್ಟ್ಸ್ 18 ನೆಟ್ವರ್ಕ್ಗಳ ಚಾನೆಲ್ಗಳಲ್ಲಿ ಪ್ರಸಾರವಾಗಲಿದೆ.
ಮೊಬೈಲ್ನಲ್ಲಿ ಪಂದ್ಯ ವೀಕ್ಷಿಸುವುದು ಹೇಗೆ?
ಭಾರತ Vs ಪಾಕಿಸ್ತಾನ ನಡುವಿನ ಪಂದ್ಯವನ್ನು ನೀವು ಜಿಯೋ-ಹಾಟ್ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ: IND vs PAK ಪಂದ್ಯಕ್ಕೂ ಮುನ್ನ ಟೀಂ ಸೇರಿದ ಸ್ಪೋಟಕ ಆಟಗಾರ..! ಗೇಮ್ ಚೆಂಜರ್ ಆಗ್ತಾರಾ ಈ ಪ್ಲೇಯರ್..?
ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ ಮತ್ತು ವರುಣ್ ಚಕ್ರವರ್ತಿ.
ಪಾಕಿಸ್ತಾನ ತಂಡ: ಮೊಹಮ್ಮದ್ ರಿಜ್ವಾನ್ (ನಾಯಕ ಮತ್ತು ವಿಕೆಟ್ ಕೀಪರ್), ಬಾಬರ್ ಆಜಮ್, ಕಮ್ರಾನ್ ಗುಲಾಮ್, ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಷ್ದಿಲ್ ಶಾ, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ಉಸ್ಮಾನ್ ಖಾನ್ ಮತ್ತು ಸೌದ್ ಶಕೀಲ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.