ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಒಂದೇ ದಿನ ಬಾಕಿ ಇದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಇಂದು ರಾತ್ರಿ 8.30ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅಕ್ಟೋಬರ್ 3 ಗುರವಾರದಂದು ನಡೆಯುವ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ..
ಸಿಎಂಗೆ ಇಡಿ ಶಾಕ್ ಬೆನ್ನಲ್ಲೇ ಸೈಟ್ ವಾಪಸ್ಗೆ ನಿರ್ಧಾರ
14 ಸೈಟ್ ಹಿಂದಿರುಸುವುದಾಗಿ ಸಿಎಂ ಪತ್ನಿ ಪಾರ್ವತಿ ಪತ್ರ
ವಿವಾದಿತ ಮುಡಾ ಸೈಟ್ ವಾಪಸ್ ಪಡೆಯುವಂತೆ ಮನವಿ
ಪತ್ರದ ಮೂಲಕ ಮುಡಾ ಆಯುಕ್ತರಿಗೆ ಸಿಎಂ ಪತ್ನಿ ಮನವಿ
ಪ್ರಕರಣದ ಸಮಗ್ರ ತನಿಖೆಗೂ ಸಿಎಂ ಪತ್ನಿಆಗ್ರಹ
ನನ್ನ ವೈಯಕ್ತಿಕ ನಿರ್ಧಾರದಿಂದ 14 ನಿವೇಶನ ವಾಪಾಸ್
ನನ್ನ ಪತಿಯ ವಿರುದ್ಧ ಕಳಂಕದ ಆರೋಪ ಬೇಡ ಎಂದು ಮನವಿ
'ರಾಜೀನಾಮೆಯೊಂದೇ ನಿಮಗೆ ಉಳಿದಿರುವ ದಾರಿ'
'ಕೆಟ್ಟ ಮೇಲೆ ಬುದ್ಧಿ ಬಂತು'ಎಂಬ ಗಾದೆ ಮಾತು ಸಿಎಂಗೆ ಅನ್ವಯಿಸುತ್ತಿದೆ
CBI-ED ತನಿಖೆಗಳ ನಿರೀಕ್ಷೆಯಿಂದ ಸಿಎಂ ಬೆದರಿದ್ದಾರೆ
ಸಿಎಂ ಸಿದ್ದು ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ
ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ
14 ಸೈಟ್ ವಾಪಸ್ಗೆ ಸಿಎಂ ಪತ್ನಿ ಪಾರ್ವತಿ ಪತ್ರ ಹಿನ್ನೆಲೆ
ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ
ವಿರೋಧ ಪಕ್ಷಗಳಿಂದ ನನ್ನ ವಿರುದ್ಧ ದ್ವೇಷದ ರಾಜಕಾರಣ
'ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ'
ಟ್ವೀಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಕಾನೂನು ಕುಣಿಕೆ ಬಿಗಿಯಾಗುತ್ತಿದ್ದಂತೆ ಸೈಟ್ ವಾಪಸ್ಗೆ ನಿರ್ಧಾರ
ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಪ್ಪನ್ನ ಒಪ್ಪಿಕೊಂಡಿದ್ದಾರೆ
ಇದು ನಮ್ಮ ಹೋರಾಟಕ್ಕೆ ಸಿಕ್ಕಿರುವ ಜಯ ಎಂದು ಆಶೋಕ್ ಟ್ವೀಟ್
ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ಟ್ವೀಟ್ ದಾಳಿ
ಸಿಎಂ ಸಿದ್ದರಾಮಯ್ಯರ 4 ದಶಗಳ ಸುದೀರ್ಘ ರಾಜಕೀಯದಲ್ಲಿ ಮೊದಲ ಬಾರಿ ಕಳಂಕವೊಂದು ಅಂಟಿಕೊಂಡಿದೆ.. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರೋ FIR ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ.. ಇದನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡಿರೋ ಬಿಜೆಪಿ ನಾಯಕರು ಸಿದ್ದರಾಮಯ್ಯರನ್ನು ಕುರ್ಚಿಯಿಂದ ಇಳಿಸಿಯೇ ಸಿದ್ಧ ಅಂತಾ ಪಣ ತೊಟ್ಟಿದ್ದಾರೆ..
ಜನರ ಆಶೀರ್ವಾದ ಇರೋವರೆಗೂ ಯಾರೂ ನನ್ನ ಏನೂ ಮಾಡೋಕಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸ್ವಲ್ಪದಿನ ತೊಂದ್ರೆ ಕೊಡಬಹುದು ಅಷ್ಟೇ. ಕಾನೂನು ಮೂಲಕ ಏನು ಮಾಡುವುದಕ್ಕೆ ಆಗಲ್ಲ. ವಿಪಕ್ಷದವರು ರಾಜೀನಾಮೆ ಕೇಳುತ್ತಿದ್ದಾರೆ ಆದ್ರೆ ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು. ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಮೋದಿ ಕ್ರಾಂಬಿನೆಟ್ ನಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ. ಹಿಂದಿನ ಯಾವುದೋ ಕೇಸ್ ನ ಎಫ್ಐಆರ್ ಇಟ್ಕೊಂಡು ಆಟವಾಡ್ತಿದ್ದಾರೆ. ದ್ವೇಷದ ರಾಜಕಾರಣ ಮಾಡ್ತಿದ್ದಾರೆ.
ನನ್ನ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಿದರೆ ಕಾಂಗ್ರೆಸ್ ಸರ್ಕಾರದ ಏಳು ಜನ ಮಂತ್ರಿಗಳು ರಾಜೀನಾಮೆ ನೀಡಬೇಕಾಗುತ್ತದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, "ದಾಖಲೆಗಳನ್ನು ಬಿಡುಗಡೆ ಮಾಡಲು ಬೇಡ ಎಂದವರು ಯಾರು?" ಎಂದರು.
CM Siddaramaiah Media Release: ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸದಸ್ಯರಿಗೆ ಈ ಅಭಿಪ್ರಾಯ ಹಾಗೂ ಸಲಹೆಗಳು ಎಷ್ಟರ ಮಟ್ಟಿಗೆ ಅಗತ್ಯವಿದೆ, ಅವು ಯಾವ ಮಟ್ಟದಲ್ಲಿವೆ ಎಂಬುದನ್ನು ಪಕ್ಷ ಪರಿಶೀಲಿಸುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದರಾದ ಜಿ.ಸಿ. ಚಂದ್ರಶೇಖರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.