ಸರಿ ಸುಮಾರು ೬ ಕಿಲೋಮೀಟರ್ ರಸ್ತೆ ಅಭಿವೃದ್ಧಿ ಸ್ಥಳಿಯರು ಆಗ್ರಹ... ಸ್ಥಳಿಯರಿಗೆ ಕಾಂಗ್ರೆಸ್ ಮುಖಂಡರು ಬೆಂಬಲ... ಸರ್ಕಾರಕ್ಕೆ ಸ್ಥಳಿಯ ಶಾಸಕರಿಗೆ ಒಳ್ಳೆ ಬುದ್ದಿ ಕೊಟ್ಟು ರಸ್ತೆ ಅಭಿವೃದ್ಧಿ ದೇವರಲ್ಲಿ ಪ್ರಾರ್ಥನೆ....
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈ ನಾಯಕರ ಸಭೆ ನಡೆಯಿತು. ರಾಜ್ಯ ಕಾಂಗ್ರೆಸ್ ನ ರಾಜ್ಯಕೀಯ ವ್ಯವಹಾರಗಳ ಸಮಿತಿ ಜೊತೆ ರಾಹುಲ್ ಗಾಂಧಿ ಸುಮಾರು 40 ನಿಮಿಷಗಳ ಕಾಲ ಸಭೆ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಪೌರಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ.. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪೌರಕಾರ್ಮಿಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಸಿಎಂ ಭರವಸೆಯನ್ನು ಬರವಣಿಗೆ ಮೂಲಕ ನೀಡಬೇಕು ಎಂದು ಪೌರ ಕಾರ್ಮಿಕರು ಪಟ್ಟು ಹಿಡಿದಿದ್ದಾರೆ..
ಪಠ್ಯಪುಸ್ತಕದಲ್ಲಿ ಹೆಡ್ಗೇವಾರ್ ಭಾಷಣ ಸೇರಿದ್ದಕ್ಕೆ ವಿರೋಧ ಮಾಡ್ತಿದ್ದಾರೆ. ಹೆಡ್ಗೇವಾರ್ ಬದಲು ಮಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ. ಈಶ್ವರ ಲಿಂಗ ಒಡೆದ ಔರಂಗಜೇಬನ ಹೆಸರು ಸೇರಿಸಬೇಕಿತ್ತಾ? ಎಂದು ಮಾಜಿ ಸಚಿವ ಈಶ್ವರಪ್ಪ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ..
ಸಚಿವ ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್ ಅವನ್ನು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ವಲಯದಲ್ಲೇ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಮಾಜಿ ಸಂಸದೆ ರಮ್ಯಾ ಬಹಿರಂಗವಾಗೇ ಅಸಮಾಧಾನ ಹೊರ ಹಾಕಿದ್ದಾರೆ.
ಕಾಂಗ್ರೆಸ್ ಅನೇಕ ಮುಖಂಡರುಗಳು ದಾಖಲೆಗಳಿಲ್ಲದೆ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ನ ಕೆಲ ನಾಯಕರು ಪುರಾವೆ ರಹಿತ ಆರೋಪ ಮಾಡಿ ಗಾಳಿಯಲ್ಲಿ ಗುಂಡುಹಾರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar), ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್, ಯುಟಿ ಖಾದರ್ ಸೇರಿದಂತೆ ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದಾರು.
ಮೈಸೂರು ರಸ್ತೆಯ ನೈಸ್ ರೋಡ್ ಬಳಿ ಕಾಂಗ್ರೆಸ್ ಹಾಕಿದಂತ ಬಂಟಿಂಗ್ ಮತ್ತು ಬ್ಯಾನರ್ ಗಳನ್ನ ಬಿಬಿಎಂಪಿ ಸಿಬ್ಬಂದಿ ತೆರವುಗೊಳಸುತ್ತಿದ್ದ ಹಿನ್ನಲೆಯಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
Karnataka congress leaders in delhi: ಸದ್ಯ ಕಾಂಗ್ರೆಸ್ ನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣ ಇದೆ. ಇದರಿಂದ ಉಭಯ ನಾಯಕರ ನಡುವೆ ಮುಕುಕಿನ ಗುದ್ದಾಟ ಹೆಚ್ಚಾಗುತ್ತಲೇ ಇದೆ, ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದು - ಡಿಕೆಶಿ ಆಂತರಿಕ ಕಚ್ಚಾಟಕ್ಕೆ ಬ್ರೇಕ್ ಹಾಕಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಹೈಕಮಾಂಡ್ ನಿಂದ ಒಗ್ಗಟ್ಟಿನ ಪಾಠ ಬೋಧನೆ ಮಾಡಿಸಲಿದ್ದು, ಒಗ್ಗಟ್ಟು ಮೂಡಿಸಲು ಸಮನ್ವಯ ಸಮಿತಿ ರಚನೆ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.