ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡ ಸಾವಿರಾರು ರೈತರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ರೈತರ ಪ್ರತಿಭಟನೆಗೆ ಮೇಲುಕೋಟೆ ಶಾಸಕ ದರ್ಶನ ಪುಟ್ಟಣ್ಣಯ್ಯ ಕೂಡ ಸಾಥ್ ಕೊಟ್ಟರು.
ಇಂದು ರಾಜಧಾನಿ ಜನರಿಗೆ ತಟ್ಟಲಿದೆ ಟ್ರಾಫಿಕ್ ಕಿರಿ.. ಕಿರಿ..! ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಬಿಸಿಯೂಟ ನೌಕರರ ಪ್ರೊಟೆಸ್ಟ್. ಬೆಂಗಳೂರಿನ ರೈಲ್ವೇ ನಿಲ್ದಾಣದಿಂದ ಪ್ರಾರಂಭ ಆಗಲಿರುವ ಜಾಥಾ. ರಾಜ್ಯದ ಮೂಲೆ ಮೂಲೆಯಿಂದಲೂ ಕಾರ್ಯಕರ್ತೆಯರ ಆಗಮನ. ಸರ್ಕಾರಗಳು ಪದೆ ಪದೇ ವಂಚಿಸುವ ಕೆಲಸ ಮಾಡ್ತಿವೆ ಎಂದು ಬೇಸರ. ಹೀಗಾಗಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬಿಸಿಯೂಟ ನೌಕರರ ತೀರ್ಮಾನ.
Bisiuta Naukarara Protest: ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಯೂಟ ನೌಕರರು ಪ್ರತಿಭಟನೆ ನಡೆಸಲಿದ್ದು, ರಾಜಧಾನಿ ಜನರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ.
ತಮಿಳುನಾಡಿನಲ್ಲಿ ಮೂರು ಬೆಳೆಗೆ ಕಾವೇರಿ ನೀರನ್ನು ಹರಿಸಲಾಗುತ್ತಿದೆ. ಇದೇ ರೀತಿ ನೀರು ಹರಿಸಿದರೇ ನಮಗೇ ಟಿಶ್ಯೂ ಪೇಪರ್ ಅನ್ನೇ ಬಳಸಬೇಕಾಗುತ್ತದೆ, ಮುಖ ತೊಳೆಯಲೂ ನೀರಿರಲ್ಲ ಎಂದು ಟಿಶ್ಯೂ ಪೇಪರ್ ಹಿಡಿದು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನೀರನ್ನು ತಮಿಳುನಾಡಿನ 3 ಬೆಳೆಗೆ ಹರಿಸಲಾಗುತ್ತಿದೆ. ಆದರೆ, ನಮ್ಮಲ್ಲಿ ಕುಡಿಯಲು ನೀರಿಲ್ಲ, ತರಕಾರಿ ಬೆಳೆಗಳು ಒಣಗುತ್ತಿವೆ. ನಮ್ಮ ರೈತರು, ಜನರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.